ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ/ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ.
ಎನ್.ಎಸ್.ಬೋಸರಾಜು, ವಸಂತಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಮತ್ತು ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ಸಿಕ್ಕಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. ತಂದೆಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರಿಗೆ ಟಿಕೆಟ್ ಸಿಕ್ಕಿದೆ.
ಇದಕ್ಕೂ ಮುನ್ನ ಬಿಜೆಪಿ ಕೂಡ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಿಜೆಪಿಯಿಂದ ಸ್ಪರ್ಧೆಗೆ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಅವಕಾಶ ಸಿಕ್ಕಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದೆ.