ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026ಕ್ಕೆ ನೋಂದಣಿ ಆರಂಭ

ಕಲಬುರಗಿ: ಜಿಲ್ಲೆಯ ಅತಿದೊಡ್ಡ ಕ್ರೀಡಾ ಸಂಭ್ರಮವಾದ ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026’*ಕ್ಕೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25, 26 ಮತ್ತು 27ರಂದು ಮೂರು ದಿನಗಳ ಕಾಲ ಕ್ರೀಡಾ ಹಬ್ಬ ನಡೆಯಲಿದೆ.

ಜಿಲ್ಲಾಡಳಿತದ ನೇತೃತ್ವದಲ್ಲಿ ಕಲಬುರಗಿ ನೆಕ್ಸ್ಟ್ ಫೌಂಡೇಷನ್ (Kalaburagi Next Foundation) ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಈ ಕ್ರೀಡಾ ಹಬ್ಬದಲ್ಲಿ ಜಿಲ್ಲೆಯಾದ್ಯಂತದ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಹಾಗೂ ಕುಟುಂಬಗಳು ಭಾಗವಹಿಸಲಿದ್ದಾರೆ.

ಈ ಕುರಿತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ‘X’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿ ತನ್ನ ಅತಿದೊಡ್ಡ ಕ್ರೀಡಾ ಸಂಭ್ರಮಕ್ಕೆ ಸಜ್ಜಾಗುತ್ತಿದೆ ಎಂದು ತಿಳಿಸಿದ್ದಾರೆ.

ಕ್ರಿಕೆಟ್, ಫುಟ್‌ಬಾಲ್, ವಾಲಿಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಚೆಸ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸೈಕ್ಲಿಂಗ್‌ನಂತಹ ಕ್ರೀಡಾ ಚಟುವಟಿಕೆಗಳಲ್ಲಿಯೂ ಕ್ರೀಡಾಭಿಮಾನಿಗಳು ಪಾಲ್ಗೊಳ್ಳಬಹುದಾಗಿದೆ. ಕ್ರೀಡಾ ಸ್ಪರ್ಧೆಗಳ ಜತೆಗೆ ಮನರಂಜನೆ, ವಿವಿಧ ಚಟುವಟಿಕೆಗಳು ಮತ್ತು ಸಮುದಾಯದ ಎಲ್ಲ ವರ್ಗದ ಜನರು ಒಟ್ಟಾಗಿ ಸೇರಿ ಸಂಭ್ರಮಿಸುವಂತಹ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜಿಸಲಾಗಿದೆ. ಈ ಮೂಲಕ ಕ್ರೀಡೆಯನ್ನು ಕೇವಲ ಸ್ಪರ್ಧೆಯಾಗಿ ನೋಡದೆ, ಇಡೀ ಸಮುದಾಯವನ್ನು ಒಗ್ಗೂಡಿಸುವ ಉತ್ಸವವನ್ನಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

“ನಮ್ಮ ಯುವ ಕ್ರೀಡಾಪಟುಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು, ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರ ಜತೆಗೆ ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು” ಎಂದು ಪ್ರಿಯಾಂಕ್ ಖರ್ಗೆ ಅವರು ಕರೆ ನೀಡಿದ್ದಾರೆ.

“ನಿಮ್ಮ ನೆಚ್ಚಿನ ಕ್ರೀಡೆಯನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ತಂಡವನ್ನು ಕರೆತನ್ನಿ. ಬನ್ನಿ, ಕಲಬುರಗಿ – ಆಟವಾಡೋಣ!” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಂದೇಶ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು, ಯುವಜನರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದು ಹಾಗೂ ಕ್ರೀಡೆಯ ಮೂಲಕ ಆರೋಗ್ಯಕರ ಮತ್ತು ಸಕ್ರಿಯ ಸಮುದಾಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಈ ಕ್ರೀಡಾ ಹಬ್ಬ ಮಹತ್ವದ ಹೆಜ್ಜೆಯಾಗಗಲಿದೆ ಎಂದೂ ಸಚಿವರು ವಿವರಿಸಿದ್ದಾರೆ

ಸೆಪ್ಟೆಂಬರ್ 25, 26 ಮತ್ತು 27ರಂದು ನಡೆಯಲಿರುವ ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026ರಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

More articles

Latest article

Most read