ಬೆಂಗಳೂರು/ಚಾಮರಾಜನಗರ: ಆ 15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಗ್ರಾಮದ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿರುವ ಘಟನೆ ಇದೀಗ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಕರಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿರುವುದಾಗಿ ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಓರ್ವ ಅರಣ್ಯ ಸಿಬ್ಬಂದಿಗೂ ಗಾಯವಾಗಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಬೇಟೆಗಾರರ ಪೈಕಿ ಒಬ್ಬರು ಪರಾರಿಯಾಗಿದ್ದಾರೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಸ್ಥಳದಿಂದ ಒಂದು ನಾಡಬಂದೂಕು ಹಾಗೂ ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ.
ಈ ನಡುವೆ, ಮೃತಪಟ್ಟ ಮೂವರ ಮೃತದೇಹಗಳನ್ನು ಮೈಸೂರಿನ ಶವಾ…

