ಬೆಂಗಳೂರು: ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಬೆಂಗಳೂರು ನಗರ ನೀರು ಸರಬರಾಜು ಮತು ಒಳ ಚರಂಡಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ಮತ್ತು ಲೋಕಾಯುಕ್ತ ಎಸ್.ಪಿ. ವಂಶಿಕೃಷ್ಣ ಅವರ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ಕಡತಗಳ ಪರಿಶೀಲನೆ ನಡೆಯುತ್ತಿದೆ.