ನಲಿ ಕಲಿ ಯೋಜನೆ ವಿಫಲತೆ ಬಗ್ಗೆ ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ

ಸರ್ಕಾರಿ ಶಾಲೆಗಳಲ್ಲಿ ನಲಿ ಕಲಿ ಯೋಜನೆ ವಿಫಲ

0
18

ಬೆಂಗಳೂರು : ನಲಿಕಲಿ ಯೋಜನೆ ವಿಫಲತೆ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಸಮಾಧಾನ ಹೊರ ಹಾಕಿದೆ. ಮಕ್ಕಳ ಉದ್ದೇಶ ಈಡೇರಿಸುವಲ್ಲಿ ಸಂಪೂರ್ಣ ವಿಫಲಗೊಂಡಿರುವ ಕುರಿತು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಮಹತ್ವದ ವರದಿ ಸಲ್ಲಿಸಿದ್ದಾರೆ.

1995-96ರಲ್ಲಿ ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ ಕಲಿ ಯೋಜನೆ, ನಂತರ 2010-11ರಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ವಿಸ್ತರಣೆಗೊಂಡಿತ್ತು. ಮಕ್ಕಳಿಗೆ ಚಟುವಟಿಕೆ ಆಧಾರಿತ ಶಿಕ್ಷಣ ನೀಡಲು ಹಾಗೂ ಭಾಷಾ ಕೌಶಲ್ಯ ವೃದ್ಧಿ ಹಾಗೂ ವಿದ್ಯಾರ್ಥಿ ಕೇಂದ್ರಿತ ಕಲಿಕೆ ವ್ಯವಸ್ಥೆ ರೂಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿತ್ತು. ಆದರೆ, ದಿನಕಳೆದಂತೆ ನಲಿಕಲಿ ಯೋಜನೆ ಸಂಪೂರ್ಣ ವಿಫಲಗೊಳ್ಳುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಯೋಜನೆ ವೈಫಲ್ಯಕ್ಕೆ ಕಾರಣವಾಗಿರುವ ಅಂಶಗಳು ಹೀಗಿವೆ :
ಶಿಕ್ಷಕರಿಗೆ ಸಮರ್ಪಕ ತರಬೇತಿ ಕೊರತೆ, ಬಹು ತರಗತಿಗಳ ನಿರ್ವಹಣೆಯಲ್ಲಿ ಶಿಕ್ಷಕರ ವಿಫಲತೆ, ಹೆಚ್ಚಿನ ವಿದ್ಯಾರ್ಥಿಗಳಿಂದ ವೈಯಕ್ತಿಕ ಗಮನ ಕೊರತೆ, ಅಗತ್ಯ ಕಲಿಕಾ ಸಾಮಗ್ರಿಗಳ ಸರಿಯಾದ ಪೂರೈಕೆ ಆಗಿಲ್ಲ, ಯೋಜನೆ ಬಗ್ಗೆ ಶಿಕ್ಷಕರ ಹಾಗೂ ಪೋಷಕರ ಅರಿವು ಕಡಿಮೆ, ಸರ್ಕಾರಿ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ, ಮೌಲ್ಯಮಾಪನ ವ್ಯವಸ್ಥೆ ನಿರ್ವಹಣೆಯಲ್ಲಿ ತೊಂದರೆ, ಮೂರನೇ ತರಗತಿ ನಂತರ ವಿದ್ಯಾರ್ಥಿಗಳಿಗೆ ಹೊಂದಿಕೊಳ್ಳುವ ಸಮಸ್ಯೆಗಳು ಎದುರಾಗಿವೆ ಎಂದು ಮಾಹಿತಿ ನೀಡಿದರು. 

ಈ ಬಗ್ಗೆ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಮೂರು ತರಗತಿಗಳಿಗೆ ಒಬ್ಬ ಶಿಕ್ಷಕ ಎಂಬ ವ್ಯವಸ್ಥೆಯ ವಿರುದ್ಧ,  ಕನ್ನಡ ಭಾಷಾ ಕಲಿಕೆಯ ಗುಣಮಟ್ಟ ಹೆಚ್ಚಳವಾಗಿಲ್ಲ. ನಲಿ ಕಲಿ ಯೋಜನೆ, ಪ್ರಾಥಮಿಕ ಹಂತದಲ್ಲಿ ಭಾಷಾ ಕಲಿಕೆಯ ಗುಣಮಟ್ಟ ಹೆಚ್ಚಿಸಲು ವಿಫಲವಾಗಿವೆ ಎಂಬ ಕಾರಣದಿಂದ ಪೋಷಕರು ಪೋಷಕರು ಆಕ್ರೋಶಗೊಂಡಿದ್ದಾರೆ. 

LEAVE A REPLY

Please enter your comment!
Please enter your name here