ಪ್ರಧಾನಿ ಮೋದಿ ಸರ್ಕಾರ 2 ವರ್ಷ ಉಳಿಯದು; ಸಂಜಯ್ ರಾವತ್ ಭವಿಷ್ಯ

Most read

ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ವರ್ಷ ಉಳಿದುಕೊಳ್ಳುವುದಿಲ್ಲ ಎಂದು  ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋದಿ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಲು ವಿಫಲವಾದರೆ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಲ್ಲಿ ರಾಜಕೀಯ ಬದಲಾವಣೆಗಳಾಗಬಹುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) ಪಕ್ಷ ಸೋಲು ಕಂಡ ನಂತರ ಕೆಲ ಶಾಸಕರು ಪಕ್ಷ ತೊರೆಯಬಹುದು ಎಂಬ ವದಂತಿಗಳನ್ನು ಅವರು ತಳ್ಳಿಹಾಕಿದರು ಶಾಸಕರು ಮತ್ತು ನಾಯಕರು ಪಕ್ಷ ತೊರೆಯಲಿದ್ದಾರೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿದ್ದು, ಸ್ಥಳೀಯ ಸಮಸ್ಯೆಗಳ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಷ್ಟೇ. ಬೇರೇನೂ ಇಲ್ಲ ಎಂದು ಹೇಳಿದರು.

More articles

Latest article