ಬೆಂಗಳೂರು: ಬಿಕ್ಲು ಶಿವ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಬುಧವಾರ ಬೆಳಿಗ್ಗೆ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈವರೆಗೂ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಿಲ್ಲ. ಬೈರತಿ ಬಸವರಾಜ್ ಸದ್ಯ ಅಜ್ಞಾತ ಸ್ಥಳದಲ್ಲಿದ್ದು, ಸಿಐಡಿ ಅಧಿಕಾರಿಗಳು ಬೈರತಿ ಬಸವರಾಜ್‌ಗೆ ಹುಡುಕಾಟ ನಡೆಸಿದ್ದಾರೆ.
ಮೂರು ತಿಂಗಳ ಹಿಂದೆ ಸಿಐಡಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಆದರೆ ಹೈಕೋರ್ಟ್ ರಜಾ ಕಾಲ ಪೀಠದಿಂದ ಜಾಮೀನು ಆದೇಶ ನೀಡಿತ್ತು. ಜಾಮೀನು ಸಿಕ್ಕ ನಂತರ ಲುಕ್ ಔಟ್ ನೋಟಿಸ್ ಮಾನ್ಯತೆ ಕಳೆದುಕೊಂಡಿತ್ತು. ಈ ಬಗ್ಗೆ ಸಿಐಡಿ ಅಧಿಕಾರಿಗಳು ಕಾನೂನು ತಜ್ಞರ ಜೊತೆಗೆ ಚರ್ಚಿಸಲು ನಿರ್ಧರಿಸಿದ್ದಾರೆ. ಫೆ.4ರಿಂದಲೂ ಬೈರತಿ ಬಸವರಾಜ್ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಸಿಐಡಿ ಪೊಲೀಸರು ಮುಂಬೈಗೆ ತೆರಳಿ ಹುಡುಕಾಟ ನಡೆಸಿದ್ದಾರೆ.
ಬಿಕ್ಲು ಶಿವ ಸಾವು ಪ್ರಕರಣ : ಜಾಮೀನು ಅರ್ಜಿ ವಜಾ ಸುಪ್ರೀಂಕೋರ್ಟ್ ಮೊರೆ ಹೋದ ಬೈರತಿ ಬಸವರಾಜ್