ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಓರ್ವ ಸಾವು, ಸುಮಾರು 130 ಜನರಿಗೆ ಗಾಯ

Most read

ಪುರಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ವೇಳೆ ಕಾಲ್ತುಳಿತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಒಡಿಶಾದ ಕಡಲತೀರದ ಪಟ್ಟಣವಾದ ಪುರಿಯಲ್ಲಿ ಭಾನುವಾರದಂದು ವಾರ್ಷಿಕ ಭಗವಾನ್ ಜಗನ್ನಾಥ ರಥಯಾತ್ರೆ ನಡೆಯುತ್ತಿದ್ದು ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸಿದ್ದಾರೆ. ರಥಯಾತ್ರೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಬೋಲಂಗಿರ್ ಜಿಲ್ಲೆಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಥ ಎಳೆಯುವ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡು ಸಾವನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿ ರಥ ಎಳೆಯುವಾಗ ಮೂರ್ಚೆ ಹೋಗಿ ಬಿದ್ದಿದ್ದರು ಅವರನ್ನು ಸ್ಥಳೀಯ ಆಶ್ಪತ್ರೆಗೆ ಸೇರಿಸಿದ್ದಾದರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ಮೆರವಣಿಗೆಯನ್ನು ಮುನ್ನಡೆಸುವ ಬಲಭದ್ರ ದೇವರ ರಥವನ್ನು ಎಳೆಯುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡ ಭಕ್ತರಿಗೆ ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

More articles

Latest article