ಪ್ರಶ್ನೆ ಪತ್ರಿಕೆ ಲೀಕ್‌ ಪ್ರಕರಣದಲ್ಲಿ ಭಾಗಿಯಾದರೆ 1ಕೋಟಿ ರೂ. ದಂಡ, 10 ವರ್ಷ ಕಠಿಣ ಜೈಲು ಶಿಕ್ಷೆ

ನವದೆಹಲಿ : ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಸಂಬಂಧ ಕೊನೆಗೂ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ, ಕಠಿಣ ಕ್ರಮಗಳೊಂದಿಗೆ ಲೋಕಸಭೆಯಲ್ಲಿ ಮಂಡಿಸಲು ಸಿದ್ಧವಾಗಿರುವ ವಿಧೇಯಕಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಪ್ರಸ್ತಾವಿತ ಮಸೂದೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ 10 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಇಂತಹ ಪ್ರಕರಣಗಳಲ್ಲಿ ಕನಿಷ್ಠ ಜೈಲು ಶಿಕ್ಷೆಯನ್ನು ಈಗಿನ ಮೂರು ವರ್ಷಗಳಿಂದ ಐದು ವರ್ಷಗಳಿಗೆ ಹೆಚ್ಚಿಸುವ ಪ್ರಸ್ತಾವವೂ ಒಳಗೊಂಡಿದೆ.

ಮಸೂದೆಯು ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುವುದು, ಓಎಂಆರ್‌ ಹಾಳೆಗಳನ್ನು ತಿರುಚುವುದು, ನಕಲಿ ವೆಬ್‌ಸೈಟ್‌ಗಳನ್ನು ರಚಿಸುವುದು ಮತ್ತು ನಕಲಿ ಪ್ರವೇಶ ಪತ್ರಗಳನ್ನು ನೀಡುವುದು ಸೇರಿದಂತೆ 15 ಕಾನೂನುಬಾಹಿರ ಕೃತ್ಯಗಳನ್ನು ವಿವರಿಸಿ ಅದಕ್ಕೆ ಶಿಕ್ಷೆ ಮತ್ತು ದಂಡ ಪ್ರಮಾಣವನ್ನು ನಿಗದಿಪಡಿಸಿದೆ.

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಕಾಪಾಡಲು ಕಠಿಣ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಈ ನಿರ್ಧಾರ ಕೈಗೊಂಡಿದೆ.

ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾದ ಮಸೂದೆಯನ್ನು ಶೀಘ್ರದಲ್ಲಿಯೇ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

‘ನಾವು ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದ್ದೇವೆ. ಅದನ್ನು ಯಾವಾಗ ಮಂಡಿಸಲಾಗುವುದು ಎಂಬುದನ್ನು ತಿಳಿಸುತ್ತೇವೆ. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಈ ಮಸೂದೆಯಲ್ಲಿ ಯಾವುದೇ ವಿಳಂಬವಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಪ್ರಧಾನಿಯವರ ಆಶಯವೇ ದೇಶದ ಆಶಯವೂ ಆಗಿದೆ. ಹೀಗಿರುವಾಗ ಇದನ್ನು ತಡೆಯಲು ಯಾವುದೇ ತಂತ್ರಗಳನ್ನು ಅನುಸರಿಸುವುದು ಸರಿಯಲ್ಲ,’ ಎಂದು ರಿಜಿಜು ಹೇಳಿದರು.

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವುದನ್ನು ಕಾಂಗ್ರೆಸ್ ಮುಂದುವರಿಸಿದರೆ ಅದಕ್ಕೆ ರಾಜಕೀಯವಾಗಿ ಉತ್ತರಿಸಬೇಕಾಗುತ್ತದೆ. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಾವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಸಂಸತ್ತಿನಲ್ಲಿ ಚರ್ಚೆ ನಡೆಯದಂತೆ ಕಾಂಗ್ರೆಸ್ ಪಕ್ಷವು ನಿರಂತರ ಅಡೆತಡೆ ಸೃಷ್ಟಿಸಬಾರದು ಎಂದು ಅವರು ಮನವಿ ಮಾಡಿದರು.

ಎನ್‌ಟಿಎ  47 ಸಿಬ್ಬಂದಿ ವಜಾ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಭಾರಿ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಸುಮಾರು 47 ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.

ವಜಾಗೊಂಡಿರುವ 47 ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಕೆಲವರು ತೀವ್ರ ಶಿಸ್ತು ಕ್ರಮಗಳನ್ನು ಎದುರಿಸಲಿದ್ದಾರೆ. ಕೇವಲ ಸಿಬ್ಬಂದಿಯನ್ನು ಬದಲಾಯಿಸುವುದು ಮಾತ್ರವಲ್ಲದೆ, ಸಂಸ್ಥೆಯ ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಹೆಚ್ಚಿಸಲು ಇಡೀ ಆಡಳಿತ ಚೌಕಟ್ಟನ್ನು ಮೂಲಭೂತವಾಗಿ ಪುನರ್‌ರಚಿಸುವುದು ಮುಖ್ಯ ಉದ್ದೇಶವಾಗಿದೆ.

More articles

Latest article

Most read