ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್!‌ 10,800 ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ: ಮೂಂಬರುವ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೂ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.

ಶಾಲೆಗಳ ಮೂಲಸೌಕರ್ಯಕ್ಕಾಗಿ ರೂ. 500 ಕೋಟಿ ವ್ಯಯಿಸಲಾಗುತ್ತಿದೆ. 5,000 ಸರ್ಕಾರಿ ಶಾಲೆಗಳಲ್ಲಿ ರೂ. 160 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್, ವಿಜ್ಞಾನ ಪ್ರಯೋಗಾಲಯ ಅಳವಡಿಸಲಾಗುವುದು. ಎಲ್.ಕೆ.ಜಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ ಹಾಗೂ ಉಚಿತ ನೋಟ್‌ಬುಕ್  ನೀಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದರು.

More articles

Latest article

Most read