ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ.
• ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
• ಉನ್ನತ ಶಿಕ್ಷಣ ಇಲಾಖೆಯಡಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2ನೇ ಆವೃತ್ತಿ (UUCMS-V-2.0) ಯನ್ನು ರೂ.40.29 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ.
• ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ 110 ಜಂಕ್ಷನ್ ಗಳಲ್ಲಿ ಬೆಂಗಳೂರು ನಗರಕ್ಕೆ ಅವಶ್ಯಕವಿರುವ ಟ್ರಾಫಿಕ್ ಸಿಗ್ನಲ್ ಗಳನ್ನು ರೂ. 56.45 ಕೋಟಿಗಳ ಅಂದಾಜು ಅನುಷ್ಠಾನಗೊಳಿಸಲು ಅನುಮತಿಯನ್ನು ಸಚಿವ ಸಂಪುಟ ನೀಡಿದೆ.
• ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ-2025-32ಕ್ಕೆ ಅನುಮೋದನೆ.
• ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ.
• ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ರೂ.95.60 ಕೋಟಿಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ.
• PM-ABHIM & Re-appropriate anticipated saving budget during 2021-26 ರಡಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಿರ್ಮಿಸಲು ಮಂಜೂರಾಗಿರುವ 50 ಹಾಸಿಗೆಗಳ ತೀವು ನಿಗಾ ಆರೈಕೆ ಘಟಕವನ್ನು (CCB) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿ, ಅಂದಾಜು ಮೊತ್ತ ರೂ.23.75 ಕೋಟಿಗಳಲ್ಲಿ (ಕಟ್ಟಡ + ವೈದ್ಯಕೀಯ ಉಪಕರಣ) ನಿರ್ಮಿಸಲು ಅನುಮೋದನೆ.
• ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
• ಚಿಕ್ಕಮಗಳೂರು ಜಿಲ್ಲೆಯ. ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು (Type-C ಮಾದರಿ) ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
• ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ ನೀಡಿದೆ.
• ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆ.
• ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಯ ರೂ.128.74 ಕೋಟಿಗಳ ವಿಸ್ತ್ರತ ಯೋಜನಾ ವರದಿಗೆ ಪರಿಷ್ಕೃತ ಆಡಳಿತಾತ್ಮಕ ಅನುಮೋದನೆ.
• ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐ.ಆರ್.ಬಿ ಪಡೆಗಳಿಗೆ ಅವಶ್ಯಕವಿರುವ ಮೂಲಭೂತ ವಸತಿ/ವಸತಿಯೇತರ ಸೌಕರ್ಯಗಳನ್ನು ರೂ.60.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಲ್ಪಿಸಲು ಅನುಮೋದನೆ.
• ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್, ಬೆಂಗಳೂರು ಸಂಸ್ಥೆಗೆ ಅವಶ್ಯವಿರುವ ರೋಬೋಟಿಕ್ ವೈದ್ಯಕೀಯ ಉಪಕರಣವನ್ನು ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.
• ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450.00 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (Glass Reinforced Plastic pipe) ರೈಸಿಂಗ್ ಮೇನ್ ಸೇರಿ ರಾಜಕಾಲುವೆಯ ಬಳಿಯ Used Water Treatment Plant ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್, ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 MLD ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರೂ.45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸರ್ಕಾರದ ಆಡಳಿತಾತ್ಮಕ ಅನುಮೋದನೆ.
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (Intermediate Sewage Pumping Station) ಮತ್ತು ಸುಮಾರು 3.5 ಕಿ.ಮೀಗಳ 450mm dia DI (Ductile Iron) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.23.36 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಹೊರಮಾವುನಲ್ಲಿರುವ 20 MLD ಬಳಸಿದ ನೀರು ಸಂಸ್ಕರಣಾ ಘಟಕವನ್ನು (UWTP) 05 ವರ್ಷಗಳ ಅವಧಿಗೆ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.
• ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7) ಅವಕಾಶದಡಿ 1200 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ.
• ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಿಪಿಪಿ ಮಾದರಿಯಲ್ಲಿ ಪ್ರತಿನಿತ್ಯ 1750 ಮೆ. ಟನ್ ಕಟ್ಟಡಗಳ ಹಾಗೂ ನಿರ್ಮಾಣ ಸಾಮಗ್ರಿಗಳ ಭಗ್ನಾವಶೇಷ ತ್ಯಾಜ್ಯದ ಸಂಗ್ರಹಣೆ ಮತ್ತು ವಿಲೇವಾರಿ ಮಾಡುವ (750 ಟಿಪಿಡಿಯ ಒಂದು ಪ್ಯಾಕೇಜ್ ಹಾಗೂ 500 ಟಿಪಿಡಿಯ ಎರಡು ಪ್ಯಾಕೇಜ್) ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಟೆಂಡರ್ ಅನುಮೋದನೆ ನೀಡಿದೆ.