ಛತ್ತೀಸ್‌ ಗಢ: ಗುಂಡಿನ ಕಾಳಗದಲ್ಲಿ 12 ನಕ್ಸಲರ ಹತ್ಯೆ

ಸುಕ್ಮಾ(ಛತ್ತೀಸ್‌ ಗಢ): ಛತ್ತೀಸ್‌ ಗಢ ರಾಜ್ಯದ ಬಸ್ತಾರ್‌ ವಲಯದಲ್ಲಿ ವಿವಿಧ ಭಾಗಗಳಲ್ಲಿ ನಡೆದ ಎನ್‌ ಕೌಂಟರ್‌ ಗಳಲ್ಲಿ 12  ಮಂದಿ ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಕ್ಕಾ ಜಿಲ್ಲೆ ಒಂದರಲ್ಲೇ 10 ಮತ್ತು ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ನಕ್ಸಲರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.

ಸುಕ್ಮಾ ಜಿಲ್ಲೆಯ ದಕ್ಷಿಣ ಭಾಗದ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಹೊರಟಿದ್ದ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅಗ ಭದ್ರತಾ ಸಿಬ್ಬಂದಿ 10ಕ್ಕೂ ಹೆಚ್ಚು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಬಿಜಾಪುರ ಜಿಲ್ಲೆಯ ದಕ್ಷಿಣ ಭಾಗದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಜಿಲ್ಲಾ ಮೀಸಲು ಪಡೆ ತಂಡವು ಇಂದು ಮುಂಜಾನೆ 5 ಗಂಟೆ ವೇಳೆಗೆ ಇಬ್ಬರು ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಈ ತಂಡವೂ ನಕ್ಸಲ್ ನಿಗ್ರಹ ಕಾರ್ಯಾಚರಣೆಗೆ ಹೊರಟಿತ್ತು. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2025ರಲ್ಲಿ ಛತ್ತೀಸ್‌ ಗಢದಲ್ಲಿ ನಡೆದ ವಿವಿಧ ಎನ್‌ ಕೌಂಟರ್‌ ಗಳಲ್ಲಿ 285 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

More articles

Latest article

Most read