ಛತ್ತೀಸಗಢದಲ್ಲಿ ಎನ್‌ ಕೌಂಟರ್‌ ಗೆ 12 ನಕ್ಸಲರು ಬಲಿ

Most read

ಗರಿಯಾಬಂದ್: ಛತ್ತೀಸಗಢ ರಾಜ್ಯದ ಗರಿಯಾಬಂದ್‌ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ಇದೇ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದರು. ಈ ವೇಳೆ ಒಬ್ಬ ಕೋಬ್ರಾ ಸಿಬ್ಬಂದಿ ಗಾಯಗೊಂಡಿದ್ದರು.

ಛತ್ತೀಸಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದ್ದು, 12 ನಕ್ಸಲರು ಮೃತಪಟ್ಟಿದ್ದಾರೆ. ನಕ್ಸಲರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಇದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಜಿಲ್ಲಾ ಮೀಸಲು ಪೊಲೀಸ್‌ ಪಡೆ (ಡಿಆರ್‌ ಜಿ), ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ ಪಿಎಫ್‌) ಛತ್ತೀಸಗಢ ಕೋಬ್ರಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಮಹಿಳಾ ನಕ್ಸಲರ ಮೃತದೇಹ ಪತ್ತೆಯಾದ ಸ್ಥಳದಿಂದ ರೈಫಲ್ಸ್‌ ಸೇರಿದಂತೆ ಬಂದೂಕುಗಳು, ಮದ್ದುಗುಂಡುಗಳು ಮತ್ತು ಅಪಾರ ಪ್ರಮಾಣದ ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article