ಇಂದೋರ್: ಬಿಜೆಪಿ ಆಡಳಿತ ಇರುವ ಮಧ್ಯಪ್ರದೇಶದ ಇಂದೋರ್ ನ ಭಗೀರಥಪುರದಲ್ಲಿ ಕಲುಷಿತ ನೀರುಸೇವನೆಯಿಂದ 15 ಮಂದಿ ವಾಂತಿ ಮತ್ತು ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸರ್ಕಾರಿ ಮಹಾತ್ಮಗಾಂಧಿ ಮೆಮೋರಿಯಲ್ ಮೆಡಿಕಲ್ ಕಾಲೇಜಿನ ಸಮಿತಿಯು, ಕಲುಷಿತ ನೀರುಸೇವನೆ ಕುರಿತಾದ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗಿದ್ದು, ಮೃತಪಟ್ಟ 21 ಮಂದಿಯ ಪೈಕಿ 15 ಮಂದಿ ವಾಂತಿ ಮತ್ತು ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ದೇಶದ ಅತ್ಯಂತ ಸ್ವಚ್ಛ ನಗರ ಎಂದೂ ಇಂದೋರ್ ಪ್ರಶಸ್ತಿ ಪಡೆದುಕೊಂಡಿದೆ. ಕಲುಷಿತ ನೀರು ಸೇವನೆಯಿಂದ ವಾಂತಿ, ಭೇದಿಯಿಂದ 436ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 403 ಮಂದಿ ಗುಣಮುಖರಾಗಿದ್ದರೆ, 33 ಮಂದಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

