15 ವರ್ಷದ ವೈಭವ್ ಸೂರ್ಯವಂಶಿ ಈಗ ವೈಎಸ್ ಕ್ಯಾಪ್ಟನ್: ಕಾರಣ ಏನು ಗೊತ್ತೇ?

ನವದೆಹಲಿ: ಆಗಸ್ಟ್‌ 23ರಿಂದ ಆರಂಭವಾಗಲಿರುವ 2026-27ನೇ ಸಾಲಿನ ದುಲೀಪ್ ಟ್ರೋಫಿಗಾಗಿ ಪೂರ್ವ ವಲಯ (ಈಸ್ಟ್ ಝೋನ್) ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್ ಅವರನ್ನು ತಂಡದ ನಾಯಕರನ್ನಾಗಿ ನೇಮಕ ಮಾಡಲಾಗಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ
ಕೇವಲ 15 ವರ್ಷದ ಬಿಹಾರದ ಪ್ರತಿಭಾವಂತ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಪೂರ್ವ ವಲಯದ ಆರು ರಾಜ್ಯ ಕ್ರಿಕೆಟ್ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಅನುಭವಿ ಆಟಗಾರರು ಹಾಗೂ ಯುವ ಪ್ರತಿಭೆಗಳ ಸಮತೋಲನದೊಂದಿಗೆ ತಂಡವನ್ನು ಆಯ್ಕೆ ಮಾಡಲಾಗಿದ್ದು, ಬೆಂಗಾಲ್ ಮತ್ತು ಜಾರ್ಖಂಡ್ ಆಟಗಾರರಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆತಿದೆ.

ಇತ್ತೀಚಿನ ತಿಂಗಳುಗಳಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಹಾಗೂ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ವೈಭವ್ ಸೂರ್ಯವಂಶಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಅದೇ ಪ್ರದರ್ಶನದ ಆಧಾರದಲ್ಲಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಕೇವಲ 15ನೇ ವಯಸ್ಸಿನಲ್ಲೇ ಹಿರಿಯ ದೇಶೀಯ ತಂಡದ ಉಪನಾಯಕರಾಗಿರುವುದು ಅವರ ಕ್ರಿಕೆಟ್ ಜೀವನದ ಇದುವರೆಗಿನ ಅತಿದೊಡ್ಡ ನಾಯಕತ್ವದ ಜವಾಬ್ದಾರಿಯಾಗಿದೆ.

ಆದರೆ ಈ ಆಯ್ಕೆ ವಿವಾದಕ್ಕೂ ಕಾರಣವಾಗಿದೆ. ವೈಭವ್ ಸೂರ್ಯವಂಶಿ ಅವರ ಪ್ರತಿಭೆಯ ಬಗ್ಗೆ ಯಾವುದೇ ಅನುಮಾನಗಳಿಲ್ಲದಿದ್ದರೂ, ಕೆಂಪು ಚೆಂಡಿನ (ರೆಡ್‌ಬಾಲ್) ಕ್ರಿಕೆಟ್‌ನಲ್ಲಿ ಅವರ ಅನುಭವ ಇನ್ನೂ ಸೀಮಿತವಾಗಿದೆ. ಇದೇ ಕಾರಣದಿಂದ ಕೆಲವು ಮಾಜಿ ಕ್ರಿಕೆಟಿಗರು ಮತ್ತು ವಿಶ್ಲೇಷಕರು ಈ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

ಖ್ಯಾತ ಕ್ರಿಕೆಟ್ ನಿರೂಪಕ ಹರ್ಷ ಭೋಗ್ಲೆ ಸಾಮಾಜಿಕ ಜಾಲತಾಣದಲ್ಲಿ ಈ ಆಯ್ಕೆ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹಿರಿಯ ರೆಡ್‌ಬಾಲ್ ತಂಡದ ಉಪನಾಯಕರನ್ನಾಗಿ ವೈಭವ್ ಅವರನ್ನು ಆಯ್ಕೆ ಮಾಡಿದ ತರ್ಕ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ವೈಭವ್ ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕೇವಲ 12 ಇನ್ನಿಂಗ್ಸ್ ಆಡಿದ್ದು, 207 ರನ್‌ಗಳನ್ನು ಮಾತ್ರ ಗಳಿಸಿದ್ದಾರೆ. ಅವರ ಸರಾಸರಿ 17.25 ಆಗಿದೆ. ಪ್ರತಿಭೆ ಅಸಾಧಾರಣವಾಗಿದ್ದರೂ, ರೆಡ್‌ಬಾಲ್ ಕ್ರಿಕೆಟ್‌ನಲ್ಲಿ ಇನ್ನೂ ಸಾಕಷ್ಟು ಕಲಿಯಬೇಕಿದೆ. ಆ ಪಯಣದ ಆರಂಭಿಕ ಹಂತದಲ್ಲಿರುವ ಆಟಗಾರನಿಗೆ ಇಂತಹ ನಾಯಕತ್ವದ ಜವಾಬ್ದಾರಿ ನೀಡಿರುವುದು ಅಚ್ಚರಿಯ ಸಂಗತಿ ಎಂದು ಹರ್ಷ ಭೋಗ್ಲೆ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದೆಡೆ, ಆಯ್ಕೆ ಸಮಿತಿಯ ನಿರ್ಧಾರವನ್ನು ಬೆಂಬಲಿಸುವವರು ವೈಭವ್ ಸೂರ್ಯವಂಶಿ ಭಾರತದ ಭವಿಷ್ಯದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದು, ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದಲೇ ಅವರಿಗೆ ಉಪನಾಯಕ ಸ್ಥಾನ ನೀಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ದುಲೀಪ್ ಟ್ರೋಫಿಯಲ್ಲಿನ ವೈಭವ್ ಸೂರ್ಯವಂಶಿ ಅವರ ಪ್ರದರ್ಶನ ಹಾಗೂ ನಾಯಕತ್ವದ ಜವಾಬ್ದಾರಿಯನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಈಗ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

More articles

Latest article

Most read