ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು ₹1,500 ಕೋಟಿ ಮೀಸಲು

Most read

ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಮೂಲಕ ಹೇಳಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದಿದ್ದಾರೆ. ಬಜೆಟ್ ಆರಂಭಿಸುವ ಮುನ್ನ ಗೋಪಾಲಕೃಷ್ಣ ಅಡಿಗರ ನುಡಿ ಹೇಳಿದ ಸಿದ್ದರಾಮಯ್ಯ, ಕುಳಿತುಕೊಂಡು ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಬಜೆಟ್ ಮುಖ್ಯಾಂಶಗಳು:
• ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ಅಭಿವೃದ್ಧಿಗೆ ₹8 ಸಾವಿರ ಕೋಟಿ ಮೀಸಲು

• ರಾಜ್ಯದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ

• ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಭದ್ರಾ ಮೇಲ್ದಂಡೆಗೆ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

• ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು ₹1,500 ಕೋಟಿ ಮೀಸಲು

• ಬೆಂಗಳೂರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ, ಟನಲ್ ಯೋಜನೆಗೆ ₹40ಸಾವಿರ ಕೋಟಿ ಘೋಷಿಸಿದ್ದಾರೆ.

ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿಗೆ ಬದ್ಧವಾಗಿದ್ದು, 2030ರ ವೇಳೆಗೆ 20 ಲಕ್ಷ ಉದ್ಯೋಗ ಸೃಜಿಸುವ ಗುರಿ ಹೊಂದಿದೆ.

• ಸರ್ಕಾರದ ವಿವಿಧ ಫಲಾನುಭವಿಗಳಿಗೆ ಮಧ್ಯವರ್ತಿಗಳಿಲ್ಲದೆ ₹1 ಲಕ್ಷ ಕೋಟಿ ಹಣವನ್ನು ವರ್ಗಾಯಿಸಲಾಗಿದೆ. ಕಲ್ಯಾಣ ಇಲಾಖೆಗಳ ಮೂಲಕ ಅಸಾಹಯಕರನ್ನು ಬಲಗೊಳಿಸಲು ಈ ಆಯವ್ಯಯವೂ ನೆರವಾಗಲಿದೆ-ಸಿಎಂ

• ಈ ಬಾರಿಯ ಬಜೆಟ್ ಗಾತ್ರ ₹4,09,549 ಆಗಿದೆ. ಈ ಮೂಲಕ 2025-26ನೇ ಸಾಲಿನ ಬಜೆಟ್ ಗಾತ್ರ ₹4 ಲಕ್ಷ ಕೋಟಿ ದಾಟಿದೆ.

More articles

Latest article