16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ

Most read

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು ಸಂಜೆ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲನೆ ದೊರಕಿದೆ. . ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ. ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಿದ್ದಾರೆ. ವಿಧಾನಸೌಧ ಪೂರ್ವ ದ್ವಾರದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆದಿದೆ. ಮಾರ್ಚ್ 8ರ ವರೆಗೆ ಚಿತ್ರೋತ್ಸವ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯ ಅತಿಥಿಯಾಗಿ ನಟ ಶಿವರಾಜ್ ಕುಮಾರ್, ಚಲನಚಿತ್ರೋತ್ಸವದ ರಾಯಭಾರಿ ನಟ ಕಿಶೋರ್  ಅವರೂ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಶಿವರಾಜಕುಮಾರ್‌ ಅವರು ಚಲನಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು.  ಖ್ಯಾತ ಸಂಗೀತ ಸಂಯೋಜಕರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಿತು.. ಪದ್ಮವಿಭೂಷಣ ಡಾ.ಎಲ್.ಸುಬ್ರಹ್ಮಣ್ಯ ಹಾಗೂ ಪದ್ಮಶ್ರೀ ಕವಿತಾ ಸುಬ್ರಹ್ಮಣ್ಯ ಅವರ ಸಂಗೀತ ರಸಸಂಜೆ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದೆ.

60 ರಾಷ್ಟ್ರಗಳ 200 ಸಿನಿಮಾಗಳ 400 ಪ್ರದರ್ಶನ  13 ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿವೆ. ರಾಜಾಜಿನಗರದ ಒರಾಯನ್ ಮಾಲ್ ನ PVR ಸಿನಿಮಾಸ್, ಚಾಮರಾಜಪೇಟೆಯ ಡಾ.ರಾಜ್ ಕುಮಾರ್ ಭವನ, ಬನಶಂಕರಿ 2ನೇ ಹಂತದ ಸುಚಿತ್ರ ಫಿಲಂ ಸೊಸೈಟಿ ಸೇರಿದಂತೆ  3 ಪ್ರದರ್ಶನ ಕೇಂದ್ರಗಳಲ್ಲಿ ಸಿನಿಮಾ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

More articles

Latest article