ಶೀಘ್ರ 18 ಸಾವಿರ ಶಿಕ್ಷಕರ ನೇಮಕ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶೀಘ್ರವೇ 18 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮ ದಿನಾಚರಣೆ ಅಂಗವಾಗಿ ನಡೆದ  ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಲಬುರಗಿ ವಿಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. 800 ಕೆಪಿಎಸ್‌‍ಸಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 5 ಸಾವಿರ ದ್ವಿಭಾಷಾ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಎಲ್‌ಕೆಜಿ, ಯುಕೆಜಿ ಶಾಲೆಗಳನ್ನು 1 ಸಾವಿರದಿಂದ 4 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೂ ಅನುಮೋದನೆ ನೀಡಲಾಗಿದೆ. 6 ದಿನಗಳ ಕಾಲ ಮಕ್ಕಳ ಭೌತಿಕತೆ ಹೆಚ್ಚಲು ಮೊಟ್ಟೆ ಇಲ್ಲವೇ ಬಾಳೆಹಣ್ಣನ್ನು ನೀಡಲಾಗುತ್ತಿದೆ ಎಂದರು.

ನಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸಚಿವರು ಶಾಲಾ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.

More articles

Latest article

Most read