ಮೂವತ್ತು ವರ್ಷದ ಬಳಿಕ ಬಾಬರಿ ಮಸೀದಿ ಧ್ವಂಸ ನಂತರದ ಹಿಂಸಾಚಾರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಗಲಭೆಯಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ ಬೆನ್ನಲ್ಲೆ ಇದನ್ನು ವಿರೋಧಿಸಿ ಬುಧವಾರ ಬಿಜೆಪಿ ಕಾರ್ಯಕರ್ತರು ಬೆಂಗಳೂರು ಸೇರಿದಂತೆ ವಿರೋಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆ ಪ್ರತಿಭಟನೆ ನಡೆಸಿದರು..
1992 ರಲ್ಲಿ ಬಾಬರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಗಲಭೆಯಲ್ಲಿ ಭಾಗಿಯಾದ ಆರೋಪದ ಮೇಲೆ ಕರ್ನಾಟಕದ ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತನನ್ನು ಬಂಧಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆಯನ್ನು ಆಯೋಜಿಸಿದರು.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಗಳವಾರ ಮಾತನಾಡಿ, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಗೆ ಕೆಲವೇ ದಿನಗಳ ಇರುವಾಗಲೇ 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆಯುವುದರ ಹಿಂದಿನ ರಾಜ್ಯ ಸರ್ಕಾರದ ಉದ್ದೇಶವೇನು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು “ಹಿಂದೂ ವಿರೋಧಿ” ಎಂದು ಆರೋಪಿಸಿದರು. ಆದರೆ ಸಿಎಂ ಸಿದ್ದರಾಮಯ್ಯ ಈ ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ವತಿಯಿಂದ ಶ್ರೀಕಾಂತ್ ಪೂಜಾರಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪಕ್ಷದ ಬಾವುಟ, ಪೋಸ್ಟರ್, ಬ್ಯಾನರ್ ಹಿಡಿದು ಮೆರವಣಿಗೆ ನಡೆಸಿದರು.
ಫ್ರೀಡಂ ಪಾರ್ಕ್‌ನ ಪ್ರತಿಭಟನೆಯಲ್ಲಿ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಂಸದರು, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಬೈರತಿ ಬಸವರಾಜ್, ಕೆ.ಗೋಪಾಲಯ್ಯ, ಸಂಸದ ಪಿ.ಸಿ.ಮೋಹನ್, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ಡಿ. 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಹಿಂಸಾಚಾರ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿ ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.