ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಅದರಂತೆಯೇ 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ ಆರು ವರ್ಷ ವಯಸ್ಸಿನವರಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೂ ಸೂಚನೆ ನೀಡಿದೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು (RTE) ಕಾಯಿದೆ, 2009 ರಲ್ಲಿ ಒಳಗೊಂಡಿರುವ ನಿಬಂಧನೆಗಳ ಪ್ರಕಾರ ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿದ್ದು, ಪ್ರವೇಶಾತಿಗೂ ಮುನ್ನ ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿನಂತಿಸಲಾಗಿದೆ.
2024-25 ಸಾಲಿನ ಹೊಸ ಪ್ರವೇಶಾತಿಗಳು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ನಿಮ್ಮ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಪಡಿಸಲಾಗಿದೆ ಎಂದು ನಿರೀಕ್ಷಿಸಲಾಗಿದೆ. ಈ ವಿಷಯವನ್ನು ಪರಿಶೀಲಿಸಲು ಮತ್ತು ಆದೇಶದ ಅನುಷ್ಠಾನದ ಸ್ಥಿತಿಯನ್ನು ಹಂಚಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಕಾರ್ಯದರ್ಶಿ ಸೂಚಿಸಲಾಗಿದೆ.