ಬಳ್ಳಾರಿ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಸಿಎಂ

ಬೆಂಗಳೂರು: ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಮೃತ ಪಟ್ಟಿದ್ದ ವಿಜಯ ಕರ್ನಾಟಕ ಪತ್ರಿಕೆಯ ಬಳ್ಳಾರಿ ವರದಿಗಾರ ವೀರೇಶ್ ಜಿ.ಕೆ. ಅವರ ಕುಟುಂಬಕ್ಕೆ ನೆರವು ನೀಡುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಪ್ರಜಾವಾಣಿ ಸೇರಿದಂತೆ ಹಲವು ಮಾಧ್ಯಮದಲ್ಲಿ ಕೆಲಸ ಮಾಡಿದ್ದ
ವೀರೇಶ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಗಮನಕ್ಕೆ ತಂದಿದ್ದ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರು.

ಕೆಯುಡಬ್ಲೂಜೆ ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಮಂಜೂರು ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ‌, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.

More articles

Latest article

Most read