Sunday, September 8, 2024

2047 ರ ವೇಳೆಗೆ ‘ವಿಕಸಿತ ಭಾರತ’ ಗುರಿಯನ್ನು ದೇಶ ಸಾಧಿಸಲಿದೆ : ಸೀತಾರಾಮನ್

Most read

ನವದೆಹಲಿ : 2047 ರಲ್ಲಿ ಭಾರತವು 100 ವರ್ಷಗಳ ಸ್ವಾತಂತ್ರ್ಯವನ್ನು ಪೂರ್ಣಗೊಳಿಸುವ ವೇಳೆಗೆ ‘ವಿಕಸಿತ ಭಾರತ’ ಗುರಿಯನ್ನು ಸಾಧಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ & ಇಂಡಸ್ಟ್ರಿ ಆಯೋಜಿಸಿದ್ದ ‘ವಿಕಸಿತ ಭಾರತ @ 2047 ಮತ್ತು ಉದ್ಯಮ’ ಕುರಿತು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯಲ್ಲಿ ಸುಧಾರಣೆಗಳನ್ನು ಮುಂದುವರಿಸಲಾಗುವುದು ಎಂದು ಭರವಸೆ ನೀಡಿದರು.

ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾಗಲಿದೆ ಮತ್ತು ಪ್ರಧಾನಿ ಮೋದಿ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಮತ್ತೆ ಬರುತ್ತಾರೆ ಎಂದು ಬಿಜೆಪಿ ವಿಶ್ವಾಸ ಹೊಂದಿದೆ ಎಂದರು.

ಕಳೆದ 10 ವರ್ಷಗಳಲ್ಲಿ ಸರ್ಕಾರವು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ ಮತ್ತು ಜಗತ್ತಿನ ಆರ್ಥಿಕತೆಯಲ್ಲಿ ಭಾರತವು ಮೂರನೇ ಅತಿದೊಡ್ಡ ರಾಷ್ಟ್ರವಾಗುವ ಹಾದಿಯಲ್ಲಿದೆ ಎಂದು ಹೇಳಿದರು.

More articles

Latest article