ಬೆಂಗಳೂರು: ಚನ್ನಪಟ್ಟಣದಲ್ಲಿ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಶೇ.27.02ರಷ್ಟು ಮತದಾನವಾಗಿದೆ. 31160 ಪುರುಷರು ಹಾಗೂ 31781 ಮಹಿಳೆಯರು ಮತದಾನದಲ್ಲಿ ಭಾಗಿಯಾಗಿದ್ದಾರೆ.
ಶಿಗ್ಗಾಂವಿಯಲ್ಲಿ ಬೆಳಗ್ಗೆ 7ರಿಂದ 11 ಗಂಟೆಯವರೆಗೆ ಶೇ.26.01 ರಷ್ಟು ಮತದಾನ ನಡೆದಿತ್ತು. 32,315 ಪುರುಷರು ಮತ್ತು 29451 ಮಹಿಳೆಯರು ಹಕ್ಕು ಚಲಾಯಿಸಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ 9 ಗಂಟೆಯವರೆಗೆ ಶೇ.10.11ರಷ್ಟು ಮತದಾನವಾಗಿತ್ತು. ಶಿಗ್ಗಾಂವಿಯಲ್ಲಿ ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಶೇ.10.08 ರಷ್ಟು ಮತದಾನ ನಡೆದಿತ್ತು. ಇಲ್ಲಿ ಇದುವರೆಗೂ 23,951 ಮತದಾರರು ಹಕ್ಕು ಚಲಾಯಿಸಿದ್ದಾರೆ.
ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಎನ್ ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ.
ಮೂರು ಕ್ಷೇತ್ರಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ವಿಶೇಷವಾಗಿ ಯುವಕರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದಾರೆ. ಹಿರಿಯ ನಾಗರೀಕರೂ ಸಹ ಆಸಕ್ತಿಯಿಂದ ಮತಗಟ್ಟೆಗಳಿಗೆ ಆಗಮಿಸುತ್ತಿದ್ದರು.
ಮತದಾನಕ್ಕೂ ಮುನ್ನ ಅಭ್ಯರ್ಥಿಗಳು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಗೆಲುವಿಗೆ ಪ್ರಾರ್ಥಿಸಿದರು. ಚನ್ನಪಟ್ಟಣದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರೂ ದೇವರ ಮೊರೆ ಹೋಗಿದ್ದಾರೆ. ಮತದಾನಕ್ಕೂ ಮುನ್ನ ಕೆಂಗಲ್ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.