2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಮೂರು ಸ್ಥಳ ನಿಗದಿ ಮಾಡಿದ ರಾಜ್ಯ ಸರ್ಕಾರ

Most read

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಈ ಮೂರು ಸ್ಥಳಗಳನ್ನು ಅಂತಿಮಗೊಳಿಸಿ ಅಧಿಕೃತವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. 2025ರ ಮಾರ್ಚ್ 5 ರಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ಸಂಬಂಧ ರಾಜ್ಯ ಸರ್ಕಾರವೇ ಅಧಿಕೃತ ‌ಮಾಹಿತಿ ನೀಡಿದೆ.

1. ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಹತ್ತಿರ

2. ಬೆಂಗಳೂರು ದಕ್ಷಿಣ ತಾಲೂಕು ಸೋಮನಹಳ್ಳಿ ಹತ್ತಿರ‌‌

3. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ನೆಲಮಂಗಲ ಹತ್ತಿರ

ಇದೇ ವೇಳೆ HAL ವಿಮಾನ ನಿಲ್ದಾಣವನ್ನು ದೇಶೀಯ ವಿಮಾನ ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜನವರಿ 16 ರಂದು ಸರ್ಕಾರ ಮನವಿ ಸಲ್ಲಿಸಿದೆ. ವಿಧಾನ ಪರಿಷತ್‌‌ನಲ್ಲಿ ಜೆಡಿಎಸ್‌ ನ ಜವರಾಯಿಗೌಡ ಪ್ರಶ್ನೆಗೆ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಲಿಖಿತ ಉತ್ತರ ನೀಡಿದ್ದಾರೆ.

More articles

Latest article