Sunday, July 14, 2024

ನಟ ಯಶ್ ಹುಟ್ಟುಹಬ್ಬ ಫ್ಲೆಕ್ಸ್ ಕಟ್ಟುವಾಗ ಮೂವರ ಸಾವು; ಸರ್ಕಾರದಿಂದ 2ಲಕ್ಷ ಪರಿಹಾರ: ಸಂಜೆ ಯಶ್ ಭೇಟಿ!

Most read

ಕನ್ನಡ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬ ಪ್ರಯುಕ್ತ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದ್ದು, ಮೃತಪಟ್ಟ ಮೂವರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್, ಸರ್ಕಾರ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ ಘೋಷಿಸಿದೆ. ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡಲಾಗುತ್ತದೆ. ಇಂದು ಸಂಜೆ 4 ಗಂಟೆಗೆ ನಟ ಯಶ್ ಬಂದು ಮೃತರ ಕುಟುಂಬದವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

More articles

Latest article