ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಈಶ್ವರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿಗಳುು ಪ್ರಮಾಣವಚನ ಬೋಧಿಸಿದಿರು. ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ.
ಟಿಡಿಪಿ, ಜೆಡಿಯು, ಜೆಡಿಎಸ್ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು.
ಸತತ ಮೂರು ಅವಧಿಗೆ ಆಯ್ಕೆಯಾದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ಸ್ವಾತಂತ್ರ್ಯದ ನಂತರದ ದೇಶದ ಮೊದಲ ನಾಯಕ ಜವಾಹರಲಾಲ್ ನೆಹರು ಅವರು ಬ್ರಿಟನ್‌ನಿಂದ 1947 ರಲ್ಲಿ ಸ್ವಾತಂತ್ರ್ಯ ಪಡೆದ ನಂತರ 17 ವರ್ಷಗಳ ಕಾಲ ಭಾರತವನ್ನು ಆಳಿದ್ದರು.