ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನ ಪರಿಣಾಮ 50ಕ್ಕೂ ಹೆಚ್ಚು ವಿಮಾನಗಳು (Flight) ಹಾಗೂ 10 ರೈಲುಗಳ (Train) ಪ್ರಯಾಣದಲ್ಲಿ ವ್ಯತ್ಯಯವಾಗಿದೆ.
ಇಂದು ದೆಹಲಿ-ಎನ್‌ಸಿಆರ್‌ನ (Delhi- NCR) ಹಲವು ಪ್ರದೇಶಗಳಲ್ಲಿ ದಟ್ಟ ಮಂಜಿನ ಜೊತೆಗೆ ಶೀತ ಹವಾಮಾನ ಪರಿಸ್ಥಿತಿ ಎದುರಾಗಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಭಾರತದಲ್ಲಿ ದಟ್ಟವಾದ ಮಂಜು (Fog) ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ.
ಹವಾಮಾನ ವೈಪರೀತ್ಯದಿಂದಾಗಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ. ಕಡಿಮೆ ಗೋಚರತೆಯಿಂದಾಗಿ ಮತ್ತೆ ವಿಮಾನಗಳು ಮತ್ತು ರೈಲು ಪ್ರಯಾಣದಲ್ಲಿ ವಿಳಂಬವಾಗಿದೆ. ದಟ್ಟ ಮಂಜಿನ ವಾತಾವರಣದಿಂದಾಗಿ ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ಮತ್ತು ಬರುವ ಪ್ರಯಾಣಿಕರು ಸಹ ತೊಂದರೆಗಳನ್ನು ಎದುರಿಸಿದರು.