ಸಿಎಂ ಸಮ್ಮುಖದಲ್ಲಿ ಶರಣಾದ 6 ನಕ್ಸಲರು; ಮುಖ್ಯವಾಹಿನಿಗೆ ಬರಲು ಒಪ್ಪಿದ ನಕ್ಸಲರು

Most read

ಬೆಂಗಳೂರು: ಚಿಕ್ಕಮಗಳೂರಿನ 6 ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಇವರು ಶರಣಾಗಿ ಮುಖ್ಯವಾಹಿನಿಗೆ ಬರುವುದಾಗಿ ಘೋಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ, ತಮಿಳುನಾಡಿನ ಕೆ.ವಸಂತ @ರಮೇಶ, ಕೇರಳದ ಜೀಶ, ಆಂಧ್ರದ ಮಾರೆಪ್ಪ ಅರೋಲಿ ಶರಣಾದ ನಕ್ಸಲರು.

ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್, ಪೊಲೀಸ್ ಅಧಿಕಾರಿಗಳು, ಶರಣಾದ ಆರು ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು. ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು. ಕರ್ನಾಟಕ ರಾಜ್ಯ ನಕ್ಸಲ್ ಮುಕ್ತವಾಗಿದ್ದು, ಎರಡೂವರೆ ದಶಕಗಳ ನಕ್ಸಲ್ ಚಟುವಟಿಕೆಗೆ ತೆರೆ ಬಿದ್ದಂತಾಗಿದೆ.

ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ನಕ್ಸಲರು ಶರಣಾಗುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೇ ದಿಢೀರ್ ಬದಲಾವಣೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮುಖದಲ್ಲೇ ಶರಣಾಗುವ ನಿರ್ಧಾರವನ್ನು ನಕ್ಸಲರು ಪ್ರಕಟಿಸಿದ್ದರು. ಇಂದು ಬೆಳಗ್ಗೆ ಗಂಟೆಗೆ ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಸಂಜೆ 6 ಗಂಟೆ ವೇಳೆಗೆ ಮುಖ್ಯಂತ್ರಿಗಳ ಗೃಹ ಕಚೇರಿ ಕೃಷ್ಣಗೆ ತಲುಪಿತು. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿಯೇ ಒಳಗೆ ಬಿಡಲಾಯಿತು. ಮುನ್ನೆಚ್ಚರಿಕೆಯ ಕ್ರಮವಾಗಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

More articles

Latest article