ಬೆಂಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಜನವರಿ 8, ಬುಧವಾರ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ.
ಈ ನಕ್ಸಲರು ದಕ್ಷಿಣದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದಾರೆ. ಈ ನಕ್ಸಲ್ ತಂಡದ ನಾಯಕಿ ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ದಕ್ಷಿಣ ಕನ್ನಡ ಜಿಲ್ಲೆಯ ಕುತ್ಲೂರು ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಅಲಿಯಾಸ್ ರಮೇಶ ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗುವ ಪ್ರಮುಖ ನಕ್ಸಲರು. ನಕ್ಸಲ್ ಚಟುವಟಟಿಕೆ ತೊರೆದು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ನೂರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕುತ್ಲೂರು ಸುಂದರಿ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂ ಮತ್ತು ಲತಾ ಅವರನ್ನು ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಲಾಗಿತ್ತು.
ನಕ್ಸಲರ ಶರಣಾಗತಿ ಸಮಿತಿ ಮತ್ತು ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರು ನಿರಂತರವಾಗಿ ಮುಖ್ಯಮಂತ್ರಿಗಳು, ಗುಪ್ತಚರ ಇಲಾಖೆ ಅಧಿಕಾರಿಗಳ ಜತೆ ಸಂಪರ್ಕ ಸಾಧಿಸಿ ನಕ್ಸಲರ ಶರಣಾಗತಿಗೆ ಪ್ರಯತ್ನ ನಡೆಸಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ನಕ್ಸಲಿಸಂ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಬರುವಂತೆ ಬಹಿರಂಗವಾಗಿಯೇ ಕರೆ ನೀಡಿದ್ದರು. ಈ ಹಿಂದೆಯೂ ಅನೇಕ ನಕ್ಸಲರು ಶರಣಾಗಿ ಮುಖ್ಯವಾಹಿನಿಗೆ ಸೇರ್ಪಡೆಯಾಗಿದ್ದರು.
ನಕ್ಸಲರ ಬೇಡಿಕೆಗಳೇನು?
# ಭೂಮಿ ಇಲ್ಲದ ಕುಟುಂಬಕ್ಕೆ ಐದು ಎಕರೆ ಕೃಷಿ ಭೂಮಿ ನೀಡಬೇಕು, ಶಾಶ್ವತ ಹಕ್ಕುಪತ್ರ ನೀಡಬೇಕು.
# ಎಲ್ಲಾ ಆದಿವಾಸಿ ಕುಟುಂಬಗಳಿಗೆ ಭೂಮಿ ಮತ್ತು ವಸತಿ ನೀಡಬೇಕು.
# ಕೃಷಿ ಯೋಗ್ಯ ಪಾಳುಭೂಮಿಯನ್ನು ಭೂಹೀನರಿಗೆ ಹಂಚಬೇಕು.
# ಮುಖ್ಯವಾಗಿ ಭತ್ತ ಬೆಳೆಯುವ ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಅವರಿಗೆ ಸಂಪೂರ್ಣ ಬೆಂಬಲವಾಗಿ ನಿಲ್ಲಬೇಕು.
# ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು.
# ಹೈಟೆಕ್ ಪ್ರವಾಸೋದ್ಯಮ ನಿಲ್ಲಸಿ ಪರಿಸರ ರಕ್ಷಿಸಬೇಕು.
# ಆದಿವಾಸಿಗಳಿಗೆ ಕಾಡಿನ ಮೇಲಿನ ಎಲ್ಲ ರೀತಿಯ ಅಧಿಕಾರ ಇರಬೇಕು.
# ಕುದುರೆಮುಖ ರಾಷ್ಟ್ರೀಯ ಉದ್ಯಾನವನ ರದ್ದಾಬೇಕು.
# ನಿರುದ್ಯೋಗಿಗಳಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗ ಕೊಡಬೇಕು.
# ಸಾಂಸ್ಕೃತಿಕ ಬದಲಾವಣೆಗಳಿಂದ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.
# ಹವಾಮಾನ ಬದಲಾವಣೆಯಿಂದ ಕೃಷಿ ಬೆಳೆ, ಮನುಷ್ಯನ ಬದುಕು ಮತ್ತು ಪ್ರಕೃತಿಯ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು.
# ಕರ್ನಾಟಕ, ತಮಿಳುನಾಡು ಕೇರಳ ರಾಜ್ಯಗಳಲ್ಲಿ ರೈತರನ್ನು ಒಕ್ಕಲೆಬ್ಬಿಸಬಾರದು.
# ರೈತರ ಒತ್ತುವರಿ ಭೂಮಿಯನ್ನು ತೆರವುಗೊಳಿಸುವುದನ್ನು ಕೂಡಲೇ ನಿಲ್ಲಿಸಬೇಕು.
ಮೂರು ರಾಜ್ಯಗಳಲ್ಲಿ (ಕರ್ನಾಟಕ, ತಮಿಳುನಾಡು, ಕೇರಳ) ರೈತರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು.
ರೈತರ ಒತ್ತುವರಿ ಭೂಮಿ ತೆರವುಗೊಳಿಸುವುದನ್ನು ತಕಣವೇ ನಿಲ್ಲಿಸಬೇಕು.