ಖಂಡ್ರೆ ಆದೇಶದ ಬಳಿಕ ಪಶ್ಚಿಮಘಟ್ಟದಲ್ಲಿ 69 ಎಕರೆ ಅರಣ್ಯ ಒತ್ತುವರಿ ತೆರವು

ಬೆಂಗಳೂರು:  ರಾಜ್ಯದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.

ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.

More articles

Latest article

Most read