ನಾಳೆ ಸಿಎಂ ಸಿದ್ಧರಾಮಯ್ಯಗೆ ‘7ನೇ ವೇತನ ಆಯೋಗ’ದ ವರದಿ ಸಲ್ಲಿಕೆ : ಸರ್ಕಾರಿ ನೌಕರರಲ್ಲಿ ಸಂತಸ!

Most read

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಕನಸು ನನಸಾಗುವ ಸಮಯ ಹತ್ತಿರವಿದೆ. ಹೌದು, 7ನೇ ವೇತನ ಆಯೋಗದ ಜಾರಿಗೆ ದಿನಗಣನೆ ಆರಂಭಗೊಂಡಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಲ್ಲಿಕೆ ಮಾಡಲಾಗುತ್ತಿದೆ. ವರದಿ ಆಧರಿಸಿ ವೇತನ ಹೆಚ್ಚಳದ ನಿರ್ಧಾರ ಪ್ರಕಟಿಸೋ ಸಾಧ್ಯತೆಗಳು ಹೆಚ್ಚಿದೆ ಎನ್ನಲಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ರಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ನೀಡುತ್ತಿದೆ. ಮೊದಲು ಹಳೆ ಪಿಂಚಣಿಯನ್ನು ಜಾರಿಗೊಳಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರಲ್ಲಿ ಸಂತಸ ಮೂಡಿಸಿತ್ತು. ತದನಂತರ ತುಟ್ಟಿಭತ್ಯೆ ಶೇ‌.3.75 ರಷ್ಟು ಹೆಚ್ಚಿಸಿ ಬಂಪರ್ ಕೊಡುಗೆ ನೀಡಿತ್ತು. ಈಗ ಏಳನೇ ವೇತನ ಆಯೋಗ ವರದಿ ಸಲ್ಲಿಸಿಸುತ್ತಿದ್ದು ಶೀಘ್ರದಲ್ಲೇ ಜಾರಿಗೆ ಬರಲಿ ಎಂದು ನೌಕರರು ಕಾಯುತ್ತಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜ್ಯ 7ನೇ ವೇತನ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಂದ ವರದಿ ಸಲ್ಲಿಕೆ ಮಾಡಲಾಗುತ್ತಿದೆ. ಆ ಬಳಿಕ ಯಾವ ನಿರ್ಧಾರ ಪ್ರಕಟಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

More articles

Latest article