ರಾಜ್ಯ ನೌಕರರ ಬಹು ವರ್ಷಗಳ ಬೇಡಿಕೆಯಾಗ ಏಳನೇ ವೇತನ ಶಿಫಾರಸ್ಸು ಜಾರಿಗೆ ತಂದಿದ್ದು, ಈ ಕುರಿತು ಇಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ 01-07-2022ರಿಂದಲೇ ಜಾರಿಗೆ ಬರುವಂತೆ 7ನೇ ವೇತನ ಆಯೋಗದ ವರದಿಯಂತೆ ವೇತನ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಇಂದು ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ.
ಆದೇಶದಲ್ಲಿ, ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ.
7ನೇ ರಾಜ್ಯ ವೇತನ ಆಯೋಗದ ಸಂಪುಟದ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ ಎಂದು ಹೇಳಿದೆ.
ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ದಿನಾಂಕ: 01.07.202280 ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ.

                                    