ರಾಜ್ಯ ಸರ್ಕಾರಿ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿ ಸಂಬಂಧ ಸೋಮವಾರ (ಜು.15) ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಂಪುಟ ಕಾರ್ಯಸೂಚಿಯಲ್ಲಿ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯ ಶಿಫಾರಸು ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಸಿದ್ದರಾಮಯ್ಯ ಸರ್ಕಾರ ಈಡೇರಿಸಿದೆ.
ಮಾಹಿತಿ ಪ್ರಕಾರ ಇಂದು ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಶಿಫಾರಸ್ಸನ್ನು ಜಾರಿ ಮಾಡಿದ್ದು, ಆಗಸ್ಟ್ 1 ರಿಂದ ಅನ್ವಯವಾಗಲಿದೆ ಎಂದು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
7ನೇ ವೇತನ ಆಯೋಗವು ಶೇ.27.5 ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿತ್ತು. ಮಾರ್ಚ್ 2023 ರಿಂದಲೇ ಶೇ.17 ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನು ಗರಿಷ್ಠ ಶೇ.10.5 ವೇತನ ಹೆಚ್ಚಳ ಆಗಬೇಕಿದೆ.
ಆಯೋಗದ ವರದಿಯಲ್ಲಿ ಆರಂಭಿಕ ನೌಕರರ ಕನಿಷ್ಠ ವರದಿ 17 ಸಾವಿರ ಇದ್ದು, ಅದನ್ನು ಗರಿಷ್ಠ 27 ಸಾವಿರಕ್ಕೆ ಹಾಗೂ ಹಿರಿಯ ಶ್ರೇಣಿ ನೌಕರರ ಆರಂಭಿಕ ವೇತನ ಕನಿಷ್ಠ 1.04,600 ಇದ್ದು, ಅದನ್ನು 1,67,200ಕ್ಕೆ ಪರಿಷ್ಕರಿಸುವಂತೆ ಆಯೋಗ ಶಿಪಾರಸು ಮಾಡಿದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರಿಗೆ ಹತ್ತು ಹಲವು ಸೌಲಭ್ಯಗಳು ದೊರೆಯಲಿದೆ.