ಅಮೃತಸರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಣೆ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿಕೊಂಡಿರುವ ಕಸ್ಟಮ್ಸ್ ಪೊಲೀಸರು ಓರ್ವ ಪ್ರಯಾಣಿಕನನ್ನು ಬಂಧಿಸಿದ್ದಾರೆ.
ಮನ್ ದೀಪ್ ಸಿಂಗ್ ಎಂಬ ಪ್ರಯಾಣಿಕ ಮಲೇಷ್ಯಾದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾನೆ. ತಪಾಸಣೆಯ ವೇಳೆ ಆತನ ಬ್ಯಾಗ್‌ನಲ್ಲಿ 8.17 ಕೆ.ಜಿ ಡ್ರಗ್ಸ್ ಪತ್ತೆಯಾಗಿದೆ. ಅದರ ಮೌಲ್ಯ ರೂ. 8.17 ಕೋಟಿ ಎಂದು ಅಂದಾಜು ಮಾಡಲಾಗಿದೆ. ಪ್ರಯಾಣಿಕನನ್ನು ಬಂಧಿಸಲಾಗಿದ್ದು, ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಸಿಂಗಪುರದಿಂದ ಅಮೃತಸರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ರೂ. 35.60 ಲಕ್ಷ ಮೌಲ್ಯದ 400 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ