ವೆಂಕಟಾಪುರ ನದಿ ನೀರು ಹಠಾತ್‌ ಏರಿಕೆ : ಕಪ್ಪೆ ಚಿಪ್ಪು ಸಂಗ್ರಹಿಸುತ್ತಿದ್ದ ಒಂದೇ ಕುಟುಂಬದ 8 ಮಂದಿ ದುರ್ಮರಣ

ಕಾರವಾರ  : ಕಪ್ಪೆ ಚಿಪ್ಪು ಸಂಗ್ರಹಿಸಲು ವೆಂಕಟಾಪುರ ನದಿಗೆ ತೆರಳಿದ್ದ ವೇಳೆ ದಿಢೀರ್ ನೀರು ಏರಿಕೆಯಾಗಿ ಸಂಭವಿಸಿದ ದುರ್ಘಟನೆಯಲ್ಲಿ  ಒಂದೇ ಕುಟುಂಬದ 8 ಜನರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ತಟ್ಟೆ ಹಕ್ಕಲು ಪ್ರದೇಶದಲ್ಲಿ ಭಾನುವಾರ ನಡೆದಿದೆ.

ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರನ್ನು ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಮೀನುಗಾರರು ಶೋಧನೆ ನಡೆಸುತ್ತಿದ್ದಾರೆ.  ಅಲ್ಲದೆ ನದಿಯಲ್ಲಿ ಕೊಚ್ಚಿ ಹೋಗಿದ್ದ ನಾಲ್ವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.

ಮೃತರನ್ನು ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯವರಾದ ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38), ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಅಳ್ವೆಕೋಡಿಯಲ್ಲಿ ಇವರ ಮೃತ ದೇಹ ಪತ್ತೆಯಾಗಿದೆ.

ಸ್ಥಳೀಯರ ಪ್ರಕಾರ  ಶಿರಾಲಿಯ ಒಂದೇ ಕುಟುಂಬಕ್ಕೆ ಸೇರಿದ 14 ಸದಸ್ಯರು ಭಾನುವಾರ ಬೆಳಗ್ಗೆ ದೋಣಿಯ ಮೂಲಕ ವೆಂಕಟಾಪುರ ನದಿಯ ಮಧ್ಯಭಾಗಕ್ಕೆ ತೆರಳಿ ಕಪ್ಪೆ ಚಿಪ್ಪು ಸಂಗ್ರಹಿಸಲು ಮುಂದಾಗಿದ್ದರು. ಈ ವೇಳೆ ಹಠಾತ್‌ ನದಿಯ ನೀರಿನ ಮಟ್ಟ ಏರಿಕೆಯಾಗಿ ನೀರಿನ ರಭಸಕ್ಕೆ ಹಾಗೂ ಅಲೆಗಳ ಹೊಡೆತಕ್ಕೆ ದೋಣಿ ಸಿಲುಕಿ ಮಗುಚಿ ಬಿದ್ದಿತು. ಪರಿಣಾಮ ದೋಣಿಯಲ್ಲಿ 14 ಮಂದಿ ಕೊಚ್ಚಿ ಹೋಗಿದ್ದರು.

ಮೃತರಲ್ಲಿ ಹೆಚ್ಚಿನವರು ಮಹಿಳೆಯರು

ಘಟನೆ ನಡೆದ ತಕ್ಷಣ ಸ್ಥಳೀಯ ಮೀನುಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ತೀವ್ರ ರಕ್ಷಣಾ ಕಾರ್ಯಾಚರಣೆ  ನಡೆಸಿದರು. ನದಿಯಲ್ಲಿ ಕೊಚ್ಚಿ ಹೋಗಿದ್ದವರ ಪೈಕಿ ನಾಲ್ಕು ಜನರನ್ನು ಸ್ಥಳೀಯರು   ರಕ್ಷಿಸಿದ್ದಾರೆ.  ಗಾಯಾಳುಗಳನ್ನು ತಕ್ಷಣವೇ ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 8 ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮೃತರಲ್ಲಿ ಏಳು ಮಂದಿ ಮಹಿಳೆಯರು ಹಾಗೂ ಒಬ್ಬ ಪುರುಷ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಭಟ್ಕಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರಿಗಾಗಿ ಮುಂದುವರಿದ ಶೋಧ

ದುರಂತದಲ್ಲಿ ಇನ್ನೂ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ನಾಪತ್ತೆಯಾಗಿದ್ದು, ಅವರಿಗಾಗಿ ನದಿಯಲ್ಲಿ ತೀವ್ರ ಹುಡುಕಾಟ ಮುಂದುವರಿದಿದೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ

ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್‌ʼನಲ್ಲಿ ಪ್ರತಿಕ್ರಿಯಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಸದಸ್ಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ. ಅಗಲಿದವರಿಗೆ  ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದು ಅತ್ಯಂತ ದುರಂತ ಮತ್ತು ನೋವಿನ ಘಟನೆ. ಮಾನವೀಯ ನೆಲೆಯಲ್ಲಿ, ರಾಜ್ಯ ಸರ್ಕಾರವು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ. ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ, ಮತ್ತು ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ದುರ್ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕೈಗೊಳ್ಳಬೇಕು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ  ಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾದ ಸುದ್ದಿ ಅತ್ಯಂತ ದುಃಖ ತಂದಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುರ್ಘಟನೆಯಲ್ಲಿ ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಇನ್ನೂ ಕಾಣೆಯಾಗಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಅವರು ಸುರಕ್ಷಿತವಾಗಿ ಪತ್ತೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಈ ರೀತಿಯ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಾವಶ್ಯಕ ಎಂದು ಹೇಳಿದ್ದಾರೆ.

More articles

Latest article

Most read