ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ ಎಸ್ ಆರ್ ಟಿಸಿ) ಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿವೆ. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯಕ್ಕೆ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ ಪ್ರಶಸ್ತಿ, ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ ಪ್ರಶಸ್ತಿ, ವರ್ಷದ ಅತ್ಯುತ್ತಮ ಬ್ರ್ಯಾಂಡ್ ಪ್ರಶಸ್ತಿ; ಅಂಬಾರಿ ಉತ್ಸವ ಬಸ್ ಗೆ ಅತ್ಯುತ್ತಮ ಬ್ರಾಂಡ್ ಅನುಭವ ಪ್ರಶಸ್ತಿ; ಪಲ್ಲಕ್ಕಿ ಬಸ್ ಗೆ ಅತ್ಯುತ್ತಮ ಗ್ರಾಹಕ ಸ್ವೀಕೃತಿ ಪ್ರಶಸ್ತಿ ಹಾಗೂ ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್ ಗೆ ಅತ್ಯುತ್ತಮ ಸಾರ್ವಜನಿಕ ಸಂಪರ್ಕ ಪ್ರಶಸ್ತಿ ಲಭ್ಯವಾಗಿದೆ. ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳ ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ.
ನವದೆಹಲಿಯಲ್ಲಿ, Ad World ಪ್ರಶಸ್ತಿಗಳನ್ನು ಗ್ರೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿ.ಆರ್.ಎಸ್.ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು ಎಂದು ಕೆಎಸ್ಆರ್ಟಿಸಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೊಸ ವರ್ಷದ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಂತೆ ಬಿಎಂಟಿಸಿಗೂ ಲಾಭ ಹರಿದು ಬಂದಿದೆ. ಒಂದೇ ದಿನ 35 ಲಕ್ಷ ಪ್ರಯಾಣಿಕರು ಬಿಎಂಟಿಸಿಯಲ್ಲಿ ಪ್ರಯಾಣ ಮಾಡಿದ್ದು, ಇದರಿಂದ ಬಿಎಂಟಿಸಿಗೆ ಐದು ಕೋಟಿ ರೂ. ಆದಾಯ ಬಂದಿದೆ. ಬಿಎಂಟಿಸಿ ಹಂಚಿಕೊಂಡಿರುವ ಮಾಹಿತಿ ಪ್ರಕಾರ 35,70,842 ಪ್ರಯಾಣಿಕರು ಪ್ರಯಾಣ ಮಾಡಿದ್ದು, 5,48,89,254 ರೂ. ಸಂಗ್ರಹವಾಗಿದೆ.