ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ (Dr K Sudhakar) ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಅವರ ನೆಲಮಂಗಲದ ನಿವಾಸದ ಮೇಲೆ ಐಟಿ ದಾಳಿಯಾಗಿದೆ. ಈ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ.
ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡರು.