ಹಿಂದುತ್ವ ಕಾರ್ಯಕರ್ತನನ್ನು ಥಳಿಸಿದ ಬಿಜೆಪಿ ಕಾರ್ಯಕರ್ತರು

Most read

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಉಜ್ಜೈನಿ ಮತಗಟ್ಟೆ ಬಳಿ ಹಿಂದುತ್ವ ಕಾರ್ಯಕರ್ತನೊಬ್ಬನ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ನಿನ್ನೆ ಸಂಜೆ ನಡೆದಿದೆ.

ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ಮತಗಟ್ಟೆ ಬಳಿ ಇದ್ದ ಹಿಂದುತ್ವ ಕಾರ್ಯಕರ್ತ ಪ್ರವೀಣ್ ಖಾಂಡ್ಯ ಎಂಬಾತನನ್ನು ಹಿಡಿದು ಥಳಿಸಿದ್ದಾರೆ.

ಪ್ರವೀಣ್‌ ಖಾಂಡ್ಯ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಖಾಂಡ್ಯ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದುಗೊತ್ತಾಗಿದೆ.

ಪ್ರವೀಣ್ ಖಾಂಡ್ಯನ ತಲೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಆತನನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ನೂರಾರು ಹಿಂದುತ್ವ ಕಾರ್ಯಕರ್ತರು ಆಸ್ಪತ್ರೆ ಬಳಿ ಜಮಾಯಿಸಿ, ಗೂಂಡಾಗಿರಿ ನಡೆಸಿರುವ ಬಿಜೆಪಿ ಕಾರ್ಯಕರ್ತರನ್ನು ಬಂಧಿಸುವಂತೆ ಒತ್ತಾಯಿಸಿದರು.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

More articles

Latest article