ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮತ್ತೆ ಸಾಬೀತಾಗಿದೆ: ಕೃಷ್ಣ ಭೈರೇಗೌಡ

Most read

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ನಾವು ಕೇಂದ್ರ ಸರ್ಕಾರಕ್ಕೆ ೧೮,೧೭೨ ಕೋಟಿ ಹಣ ಬಿಡುಗಡೆಗೆ ಮನವಿ ಮಾಡಿದ್ದೆವು. ೨೨೩ ತಾಲ್ಲೂಕುಗಳಲ್ಲಿ ಬರ ಹೆಚ್ಚಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಆದರೆ, ಕೇಂದ್ರ ೩೪೦೦ ಕೋಟಿ ಹಣವನ್ನ ಮಾತ್ರ ಕೊಟ್ಟಿದ್ದಾರೆ. ಬಹಳ ಅಲ್ಪ ಮೊತ್ತವನ್ನು ನೀಡಿದೆ. ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ ಎಂಬುದು ಸಾಬೀತಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಬೇಸರ ಹೊರ ಹಾಕಿದ್ದಾರೆ.

ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ನಾವು ಕೇಂದ್ರಕ್ಕೆ ಸೆ.೨೨ರಂದು ಮನವಿ ಮಾಡಿದ್ದೆವು. ನಂತರ ಕೇಂದ್ರದ ತಂಡ ವರದಿ ತನ್ನ ನೀಡಿತ್ತು. ನವೆಂಬರ್ ೧೩ರ ಹೊತ್ತಿಗೆ ಕೇಂದ್ರಕ್ಕೆ ವರದಿ ನೀಡಿತ್ತು. ಅಂದಿನಿಂದಲೂ ಈ ಬಗ್ಗೆ ಕೇಂದ್ರ ಗಮನಹರಿಸಿರಲಿಲ್ಲ. ನವೆಂಬರ್ ನಲ್ಲೇ ಪರಿಹಾರ ನೀಡಬೇಕಿತ್ತು. ಇಷ್ಟು ತಿಂಗಳು ಕಳೆದರೂ ಹಣ ನೀಡಿರಲಿಲ್ಲ. ಸುಮಾರು ನಾಲ್ಕು ತಿಂಗಳು ತೀರ್ಮಾನ ಮಾಡಿರಲಿಲ್ಲ. ಏಳು ತಿಂಗಳ ಹಿಂದೆಯೇ ನಾವು ಮನವಿ ಮಾಡಿದ್ದೆವು. ನಾವು ಕೈ ಮುಗಿದು ಮನವಿ ಮಾಡಿದರೂ ಬೆಲೆಯನ್ನೇ ಕೊಡಲಿಲ್ಲ ಎಂದು ಅವರು ವಿವರಿಸಿದ್ದಾರೆ‌.

ನಾವೇನು ಅವರನ್ನ ಭಿಕ್ಷೆ ಬೇಡಿಲ್ಲ. ಕಾನೂನಾತ್ಮಕವಾಗಿ ಕೇಂದ್ರ ಹಣ ನೀಡಬೇಕು. ಅದನ್ನ ಕೇಂದ್ರ ಬಿಡುಗಡೆ ಮಾಡಿದೆ. ಆದೂ ನಾವು ಕೇಳಿದ ಮೊತ್ತಕ್ಕಿಂತ ತುಂಬಾ ಕಡಿಮೆ ಬಿಡುಗಡೆ ಮಾಡಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಬೇಕಾಗಿ ಎಂಬುದನ್ನು ಚರ್ಚಿಸುತ್ತೇವೆ. ನಮಗೆ ಬರಬೇಕಿರುವ ಹಣವನ್ನು ಬಿಡುಗಡೆ ಮಾಡಬೇಕು. ಸುಪ್ರೀಂಕೋರ್ಟ್ ಗೆ ಹೋದ ಕಾರಣ ಕೇಂದ್ರ ಹಣ ನೀಡಿದೆ. ಇಲ್ಲದೆ ಇದ್ದಿದ್ರೆ ಹಣ ನೀಡುತ್ತಿರಲಿಲ್ಲ. ಇದರ ಸಂಪೂರ್ಣ ಹಣವನ್ನ ರೈತರಿಗೆ ಹಾಕುತ್ತೇವೆ. ನಮಗೆ ಇನ್ನೂ ಹಣ ಬಂದಿಲ್ಲ. ವಾರದೊಳಗೆ ಹಣ ಬಂದ ತಕ್ಷಣ ರೈತರಿಗೆ ತಲುಪಿಸುತ್ತೇವೆ ಎಂದಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3498.98 ಕೋಟಿ ನೀಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ.

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ.

ಇದರಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ.

ಈ ಬರ ಪರಿಹಾರದ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸುತ್ತೇನೆ.

ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ ರೂ.18,171 ಕೋಟಿ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು ರೂ.3498.98 ಕೋಟಿ ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ.

More articles

Latest article