ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ.
ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲೈಂಗಿಕರ ದೌರ್ಜನ್ಯ ನಡೆಸಿರುವ ವಿಡಿಯೊ ದೃಶ್ಯಾವಳಿಗಳ ತುಣುಕುಗಳು ಸಾಮಾಜಿಕ ಮಾಧ್ಯಮಗಳ ಹರಿದಾಡುತ್ತಿವೆ. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತಂಡ ರಚಿಸುತ್ತಿದೆ.
ತನಿಖಾ ನಡೆಸುವ ವಿಷಯ ತಿಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮಿನಿಗೆ ಹಾರಿ ಹೋಗಿದ್ದಾರೆ. ಇತ್ತ ಸಾವಿರಾರು ನೊಂದ ಮಹಿಳೆಯರು ಪ್ರಜ್ವಲ್ ಗೆ ಹಿಡಿಶಾಪ ಹಾಕುತ್ತಿದ್ದು, ನ್ಯಾಯಕ್ಕಾಗಿ ಹಂಬಲಿಸುತ್ತಿದ್ದಾರೆ.