ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಬಿಕೆ ಸಿಂಗ್ ನೇತೃತ್ವದಲ್ಲಿ SIT ತಂಡ ರಚನೆ, ವಿಚಾರಣೆಗೆ ಚಾಲನೆ!

Most read

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಎಲ್ಲೆಡೆ ಸದ್ದು ಮಾಡಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ರವರು ಕೋರಿದ ಬೆನ್ನಲ್ಲೇ ಇಂದು ತನಿಖಾ ತಂಡ ರಚನೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ದೂರಿನ ಮೇರೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಾಲಂ 354A, 354D, 506, 509 ಐಪಿಸಿ ಅಡಿ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ (Special Investigation Team) ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ, ಮೂವರ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.

ಆದೇಶದಲ್ಲಿ ತನಿಖಾ ಮುಖ್ಯಸ್ಥರಾಗಿ ಬಿಜಯ ಕುಮಾರ್ ಸಿಂಗ್, ಐಪಿಎಸ್. ಅಪರ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿ, ಬೆಂಗಳೂರು ನೇಮಿಸಿದರೆ. ಸದಸ್ಯರಾಗಿ ಸುಮನ್ ಡಿ ಪೆನ್ನೇಕರ್, ಐಪಿಎಸ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರು, ಪೊಲೀಸ್ ಪ್ರಧಾನ ಕಛೇರಿ, ಬೆಂಗಳೂರು. ಸೀಮಾ ಲಾಠರ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ ಯವರನ್ನು ತನಿಖಾ ತಂಡವನ್ನು ರಚಿಸಲಾಗಿದೆ.

ಇಂದು ಅಥವಾ ನಾಳೆ ಹೊಳೆನರಸೀಪುರ ಮತ್ತು ಹಾಸನಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುವ ಸಾಧ್ಯತೆಗಳಿದೆ. ಆದರೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಆರೋಪ ಹೊತ್ತಿರುವ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ.

More articles

Latest article