ಹಾಸನ ಪೆನ್ ಡ್ರೈವ್ ಕೇಸ್ : ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು!

ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಎಸ್ಕೇಪ್ ಆಗಿದ್ದು, ಎಸ್‌ಐಟಿ ಅವರ ಹುಡುಕಾಟ ಮುಂದುವರೆಸಿದೆ. ಇದರ ಬೆನ್ನಲ್ಲೇ ಪ್ರಕರಣದ ಕುರಿತು ಸ್ಥಳ ಮಹಜರಿಗೆ ಸಂತ್ರಸ್ತೆಯನ್ನು ರೇವಣ್ಣ ಅವರ ನಿವಾಸಕ್ಕೆ ಎಸ್ ಐಟಿ ಕರೆದುಕೊಂಡು ಬಂದಿದ್ದಾರೆ.

ಸೆಕ್ಸ್ ವಿಡಿಯೋ ಹಗರಣದ ಸಂತ್ರಸ್ತರೊಬ್ಬರನ್ನು ಎಸ್‌ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಲು ಬೆಂಗಳೂರಿನ ಬಸವನಗುಡಿಯಲ್ಲಿರುವ ಎಚ್‌ಡಿ ರೇವಣ್ಣ ಅವರ ನಿವಾಸಕ್ಕೆ ಕರೆದೊಯ್ದಿದ್ದಾರೆ. ಇನ್ನೂ ಎಸ್ ಐ ಟಿ ವಶದಲ್ಲಿರುವ ಮಾಜಿ ಸಚಿವ ರೇವಣ್ಣ ಅಧಿಕಾರಿಗಳು ಕೇಳುವ ಯಾವುದೇ ಪ್ರಶ್ನೆಗೆ ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ತಿಳಿದು ಬಂದಿದೆ.

ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾಗಿತ್ತು. ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲು ಎಸ್‌ಐಟಿ ಪ್ರಯತ್ನ ನಡೆಸುತ್ತಿದೆ.

ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಎಸ್‌ಐಟಿ ತೀರ್ವ ನಿಗಾ ವಹಿಸಿದ್ದು, ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಂತೆ ಅರೆಸ್ಟ್ ಮಾಡಲು ಸಿದ್ದತೆ ಮಾಡಿಕೊಂಡಿದೆ.

More articles

Latest article

Most read