ರಾಜ್ಯದಲ್ಕಿ ಎರಡೂ ಪಕ್ಷಗಳ ಮೈತ್ರಿ ಮುಂದುವರೆಯಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ’ ಎಂದು ಮಾಹಿತಿ ನೀಡಿದರು.
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಅವರು ಈಗಾಗಲೇ ಚಿಂತಿಸಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ಅ
ಕಾಂಗ್ರೆಸ್ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ? ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ’ ಎಂದು ಹೇಳಿದ್ದಾರೆ.