ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋಗಳನ್ನು ಹರಿಬಿಟ್ಟಿದ್ದ ಇಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ

ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್‌ ಮಾಡಿಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳಿಗೆ ಹಾಸನದ ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಹಂಚುತ್ತಿದ್ದ ಆರೋಪದ ಮೇಲೆ ಲಿಖಿತ್ ಗೌಡ, ಯಲಗುಂದ ಚೇತನ್ ಮತ್ತು ಪ್ರಜ್ವಲ್ ಎಂಬ ಮೂವರು ಆರೋಪಿಗಳನ್ನು ಭಾನುವಾರ ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಹಾಸನ ನ್ಯಾಯಾಲಯ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮತ್ತೊಂದೆಡೆ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿತನಾಗಿರುವ ಬಿಜೆಪಿ ನಾಯಕ ಮತ್ತು ವಕೀಲ ಜಿ ದೇವರಾಜೇಗೌಡನನ್ನು ಇಂದು ಪೊಲೀಸರು ಎರಡು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.
 
More articles

Latest article

Most read