ಬಿಜೆಪಿ ಗೆದ್ದರೆ SC-ST, OBC ಮೀಸಲಾತಿ ರದ್ದುಗೊಳಿಸಲಿದೆ: ಅರವಿಂದ ಕೇಜ್ರಿವಾಲ್‌

ಲಕ್ನೋ: ಭಾರತೀಯ ಜನತಾ ಪಕ್ಷ ನೇತೃತ್ವದ NDA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಸಂವಿಧಾನವನ್ನು ಬದಲಿಸಿ SC-ST, OBC ಮೀಸಲಾತಿ ರದ್ದುಗೊಳಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಲಕ್ನೋದಲ್ಲಿಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ತಮಗಾಗಿ ಮತ ಕೇಳುತ್ತಿಲ್ಲ, ಅಮಿತ್‌ ಶಾ ಅವರನ್ನು ಪ್ರಧಾನಿ ಮಾಡಲು ಮತ ಯಾಚಿಸುತ್ತಿದ್ದಾರೆ ಎಂದರು.

ಚುನಾವಣೆ ಮುಗಿದ ಎರಡು ಮೂರು ತಿಂಗಳುಗಳ ಒಳಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಅವರ ಸ್ಥಾನದಿಂದ ಕಿತ್ತುಹಾಕಲಿದೆ ಎಂದು ಕೇಜ್ರಿವಾಲ್‌ ಹೇಳಿದರು.

ಬಿಜೆಪಿ ಏನೇ ಮಾಡಿದರೂ ಈ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಉತ್ತರಪ್ರದೇಶದ ಎಲ್ಲ ಮತದಾರರೂ INDIA ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಅವರು ಕೋರಿದರು.

More articles

Latest article

Most read