ಸಂತ್ರಸ್ತೆ ಕಿಡ್ನಾಪ್ ಪ್ರಕರಣ : ಭವಾನಿ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ!

Most read

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (victim woman kidnap case ) ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (bhavani revanna) ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಇಂದು ಭವಾನಿ ಅವರ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಇಂದು (ಮೇ 31) ಭವಾನಿ ರೇವಣ್ಣ ಅವರಿಗೆ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣಗೆ ಬಂಧನದ ಭೀತಿ ಎದುರಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಇಂದಿಗೆ (ಮೇ 31) ಜಾಮೀನು ಆದೇಶ ಕಾಯ್ದಿರಿಸಿತ್ತು. ಇದೀಗ ಕೋರ್ಟ್, ​ ಭವಾನಿ ರೇವಣ್ಣ ಅವರಿಗೆ ಜಾಮೀನು ತಿರಸ್ಕರಿಸಿದೆ.

ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ಎಸ್​​ಐಟಿ ನೊಟೀಸ್ ನೀಡಿತ್ತು. ಆದರೆ, ಈ ನೊಟೀಸ್​​ಗೆ ಭವಾನಿ ರೇವಣ್ಣ ಉತ್ತರ ನೀಡಿಲ್ಲ. ಅಲ್ಲದೆ, ಕಳೆದ ಹದಿನೈದು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ.

ಭವಾನಿ ಅವರಿಗೆ ಎರಡನೇ ನೋಟಿಸ್

ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ತಾವು, ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ನಿವಾಸದಲ್ಲಿ ಇರುವುದಾಗಿ ತಿಳಿಸಿದ್ದೀರಿ. ಆದರೆ, ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

More articles

Latest article