ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಿ, ನರೇಂದ್ರ ಮೋದಿ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ತಮ್ಮ ಮಂತ್ರಿಮಂಡಲ ಸದಸ್ಯರ ಜೊತೆ ಪ್ರಧಾನಿ ಹುದ್ದೆಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಪ್ರಧಾನಿ ಮೋದಿಯವರ ರಾಜೀನಾಮೆ ಪತ್ರ ಸ್ವೀಕರಿಸಿದ ರಾಷ್ಟ್ರಪತಿಗಳು ಅದನ್ನು ಅಂಗೀಕರಿಸಿ ನೂತನ ಸರ್ಕಾರ ಮತ್ತು ಮಂತ್ರಿ ಮಂಡಲ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಕೋರಿದರು.