ಸಂತ್ರಸ್ತೆ ಕಿಡ್ನಾಪ್ ಕೇಸ್: ಜಾಮೀನು ಸಿಕ್ಕ ಬೆನ್ನಲ್ಲೇ ಎಸ್ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ

Most read

ಕೆ.ಆರ್ ಪೇಟೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಇದೀಗ ಭವಾನಿ ರೇವಣ್ಣ ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ.

ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ (Highcourt) ಸೂಚಿಸಿತ್ತು. ಅಲ್ಲದೇ ವಿಚಾರಣೆಯ ಬಳಿಕ 5 ಗಂಟೆಗಳ ಕಾಲ ಮಾತ್ರ ಅವರನ್ನು ಕಸ್ಟಡಿಯಲ್ಲಿ ಇರಿಸಿಕೊಳ್ಳಬಹುದು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಅರುಣ್ ಜೊತೆ ಇದೀಗ ಭವಾನಿ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ಈ ಹಿಂದೆ ವಿಶೇಷ ತನಿಖಾ ತಂಡ (SIT) ನೋಟಿಸ್ ನೀಡಿದರೂ ಭವಾನಿ ರೇವಣ್ಣ ಅವರ ಸುಳಿವಿರಲಿಲ್ಲ. ಹೀಗಾಗಿ ಭವಾನಿ ರೇವಣ್ಣ ಅವರು ಅಜ್ಞಾತವಾಸದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕೋರ್ಟ್ ಆದೇಶದ ಬೆನ್ನಲ್ಲೇ ಭವಾನಿ ಅವರು ಎಸ್‍ಐಟಿ ಮುಂದೆ ಹಾಜರಾಗಿರುವುದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ.

ಭವಾನಿ ಅವರನ್ನು ಎಸ್‌ಐಟಿ ಬಂಧಿಸಬಾರದು. ಕೆ ಆರ್ ನಗರ ತಾಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಿಬಾರದು. ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕೋರ್ಟ್‌ ಷರತ್ತು ವಿಧಿಸಿದೆ.

More articles

Latest article