ಕೇಂದ್ರ ಸಚಿವ ಕುಮಾರಸ್ವಾಮಿಯನ್ನು‌ ನೇರ ಭೇಟಿ ಮಾಡಿ ಶುಭ ಕೋರಿದ ಸುಮಲತ, ರಾಕ್‌ ಲೈನ್ ವೆಂಕಟೇಶ್

ಮಂಡ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ (Modi Cabinet Minister) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿರುವ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದ್ದಾರೆ.

ಲೋಕಸಭಾ ಫಲಿತಾಂಶ ಪ್ರಕಟವಾದ ಬಳಿಕ ಸುಮಲತಾ, ಸಾಮಾಜಿಕ ಜಾಲತಾಣಗಳಲ್ಲಿ ಶುಭಶಯ ತಿಳಿಸಿದ್ದರು. ಇದೀಗ ಖುದ್ದು ಭೇಟಿ ಮಾಡಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಮೂಲಕ ರಾಜಕೀಯ ಬದ್ಧ ವೈರಿಗಳು ಈಗ ಮುನಿಸು ಮರೆತು ಒಂದಾದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರೇ ಸುಮಲತಾ ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಬಲ ಕೋರಿದ್ದರು. ಆದ್ರೆ, ಸುಮಲತಾ ಮಾತ್ರ ಒಂದೇ ಒಂದು ದಿನ ಎಚ್​ಡಿಕೆ ಪರ ಪ್ರಚಾರ ಹೋಗಿಲ್ಲ.

More articles

Latest article

Most read