ದರ್ಶನ್ ಪ್ರಕರಣ: ಜನಸಂದಣಿ, ಮಾಧ್ಯಮಗಳ ಕಣ್ತಪ್ಪಿಸಿ ರಾತ್ರಿ ವೇಳೆ ಚಿತ್ರದುರ್ಗದಲ್ಲಿ ಸ್ಥಳ ಮಹಜರು

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು ಚಿತ್ರದುರ್ಗದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಸಿಪಿಐ ಸಂಜೀವ್ ಗೌಡ ನೇತೃತ್ವದಲ್ಲಿ ಆರೋಪಿ ರಾಘುನನ್ನು ಕರೆತಂದು ಸ್ಥಳ ಮಹಜರು ನಡೆಸಲಾಗಿದೆ. ಮಹಜರು ವೇಳೆ, ರೇಣುಕಾಸ್ವಾಮಿ ಕಿಡ್ನಾಪ್ ಬಗ್ಗೆ ಆರೋಪಿ ದರ್ಶನ್ ಅಭಿಮಾನಿಗಳ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಘು ಅಲಿಯಾಸ್​​ ರಾಘವೇಂದ್ರ ಮಾಹಿತಿ ನೀಡಿದ್ದಾನೆ. ಆರೋಪಿ ರಾಘು ಸಂಚು ರೂಪಿಸಿ, ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಬೆಂಗಳೂರಿನತ್ತ ಕರೆದೊಯ್ದಿದ್ದ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಬಾಲಾಜಿ ಬಾರ್ ಅಂಡ್ ರೆಸ್ಟೋರೆಂಟ್​ ಬಳಿ ಜೂನ್​ 8 ರ ಬೆಳಗ್ಗೆ 9:48ರ ವೇಳೆಗೆ ರೇಣುಕಾಸ್ವಾಮಿ ಅಡ್ಡಗಟ್ಟಿ ಆಟೋದಲ್ಲಿ ಕಿಡ್ನಾಪ್ ಮಾಡಲಾಗಿತ್ತು. ಚಳ್ಳಕೆರೆ ಗೇಟ್​ನಿಂದ ಬೆಂಗಳೂರು ರಸ್ತೆ ಮೂಲಕ ಆಟೋದಲ್ಲಿ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್​ವರೆಗೆ ಕರೆದೊಯ್ಯಲಾಗಿತ್ತು.  ಬಳಿಕ ಆರೋಪಿ ರವಿಯ ಕಾರು ಕರೆಸಿಕೊಂಡು ಬೆಂಗಳೂರಿಗೆ ತೆರಳಿದ್ದರು. ಈ ಎರಡೂ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

More articles

Latest article

Most read